ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ರಾಜಕೀಯ ನಾಯಕರು ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಇದರ ನಡುವೆಯಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕೇದಾರನಾಥಕ್ಕೆ ಹರಕೆ ಹೊತ್ತಿದ್ದಾರೆ.
ಇದನ್ನೂ ಓದಿ: ಚುನಾವಣೆ ನಡೆಸಲು ಪಾಲಿಕೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ… ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್…
ಡಿ.ಕೆ. ಶಿವಕುಮಾರ್ ಅವರು ರಾಜಸ್ಥಾನದ ಉದಯ್ ಪುರದಲ್ಲಿ ಎಐಸಿಸಿ ಆಯೋಜಿಸಿರುವ ಚಿಂತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ. 13, 14 ಮತ್ತು 15 ನೇ ತಾರೀಖಿನಂದು ಚಿಂತನ ಶಿಬಿರದಲ್ಲಿ ಪಾಲ್ಗೊಂಡು ಅಲ್ಲಿಂದ ಅವರು ಉತ್ತರಾಖಂಡದ ಡೆಹ್ರಾಡೂನ್ ಗೆ ತೆರಳಲಿದ್ದಾರೆ. ಮೇ 16 ರಂದು ಕೇದಾರನಾಥಕ್ಕೆ ಭೇಟಿ ನೀಡಲಿರುವ ಡಿ.ಕೆ. ಶಿವಕುಮಾರ್ ಅವರು ಕೇದಾರನಾಥ ನಿಗೆ ಪೂಜೆ ಸಲ್ಲಿಸಿ ಬಳಿಕ ಬದ್ರಿನಾಥಕ್ಕೆ ಭೇಠಿ ನೀಡಲಿದ್ದಾರೆ. ಮೇ. 17 ರಂದು ಹರಿದ್ವಾರಕ್ಕೆ ಭೇಟಿ ನೀಡಲಿರುವ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.