ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ತೊಡೆ ತಟ್ಟಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಜ್ಜಾಗಿದ್ದು, ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಜೀವಂತವಾಗಿಡಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರು ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿ ಅವರನ್ನು ವಶಕ್ಕೆ ಪಡೆಯುವಂತೆ ಒತ್ತಾಯಿಸಲಿದ್ದಾರೆ.
ಇದನ್ನೂ ಓದಿ: CLP ನಾಯಕ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಹೆಚ್.ನಾಗೇಶ್… ಭಾರೀ ಕುತೂಹಲ ಕೆರಳಿಸಿದ ಸಿದ್ದು-ಹೆಚ್.ನಾಗೇಶ್ ಭೇಟಿ…
ಇನ್ನು ಈಶ್ವರಪ್ಪ ಸ್ವಂತ ಜಿಲ್ಲೆ ಶಿವಮೊಗ್ಗದಲ್ಲಿಯೇ ಪ್ರತಿಭಟನೆ ಮಾಡಿ ಈಶ್ವರಪ್ಪಗೆ ಬಿಸಿ ಮುಟ್ಟಿಸಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ.