ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಇಂದು ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಅಸ್ಸಾಂ ಆದಿವಾಸಿ ಸಮುದಾಯದ ಮುರ್ಮು ರಾಷ್ಟ್ರದ ಪ್ರಥಮ ಪ್ರಜೆಯ ಹುದ್ದೆಗೆ ಆಯ್ಕೆಯಾಗುವುದು ಬಹುತೇಕ ಪಕ್ಕಾ ಆಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಹಲವರನ್ನು ಭೇಟಿಯಾಗಿ ಮುರ್ಮು ಈಗಾಗಲೇ ಧನ್ಯವಾದ ಸಲ್ಲಿಸಿದ್ದಾರೆ. ಇಂದು ಎನ್ಡಿಎ ನಾಯಕರ ಜತೆ ತೆರಳಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕರ್ನಾಟಕ ಸಿಎಂ, ಉತ್ತರ ಪ್ರದೇಶ ಸಿಎಂ ಸೇರಿದಂತೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು ಈ ವೇಳೆ ಹಾಜರಿರಲಿದ್ದಾರೆ. ಬಿಜೆಡಿ, ವೈಎಸ್ಆರ್ ಕಾಂಗ್ರೆಸ್ ಬೆಂಬಲ ಸಿಕ್ಕರೆ ಎನ್ಡಿಎಗೆ ಹಾದಿ ಸುಗಮವಾಗಲಿದೆ.