ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹೃದಯಾಘಾತದಿಂದ DYSP ಸಾವನಪ್ಪಿದ್ದು, ವಾಕ್ ಮುಗಿಸಿ ಮನೆಗೆ ಮರಳಿದ ಕೂಡಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತ ಪಟ್ಟಿದ್ದಾರೆ.
52 ವರ್ಷದ DYSP ರಮೇಶ್, 1998 ಬ್ಯಾಚ್ ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. DCRB DYSP ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾಕ್ ಮುಗಿಸಿ ಮನೆಗೆ ಮರಳಿದ ಅವರು ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಮೇಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಎಸ್ಪಿ ರಾಧಿಕಾ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಕೋಲಾರದಲ್ಲಿ ಸಾಮೂಹಿಕ ಆತ್ಮಹತ್ಯೆಗೆ ಯತ್ನ…! ಒಂದೇ ಕುಟುಂಬದ ಐವರು ಸಾವು…!