ಬೆಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ರಂಗೇರುತ್ತಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಪ್ತ ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ. ಪೊಲೀಸ್ ಅಧಿಕಾರಿ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಗೆ ಮತ ನೀಡುವಂತೆ ಧಮ್ಕಿ ಹಾಕಿತ್ತಿದ್ದರು ಎಂಬ ಆರೋಪ ಕೇಳಿಬರುತ್ತಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಂಚಾಯತಿ ಸದಸ್ಯರಿಗೆ ಮತ ನೀಡುವಂತೆ, ಬಳ್ಳಾರಿ ಲೋಕಾಯುಕ್ತ ಎಸ್ ಪಿ ಪುರುಷೋತ್ತಮ್ ಧಮ್ಕಿ ಹಾಕುತ್ತಿದ್ದರು ಎಂಬ ಆರೋಪ ಕೇಳಿಬರುತ್ತಿದೆ. ಹೌದು, ಪರಿಷತ್ ಚುನಾವಣೆಗೆ ಜೆಡಿಎಸ್ ಗೆ ಮತ ನೀಡುವಂತೆ ಖುದ್ದು ಪೊಲೀಸ್ ಅಧಿಕಾರಿಯಿಂದಲೇ ಧಮ್ಕಿ ಹಾಕುತ್ತಿದ್ದಾರೆ. ಮಾಡುವ ಕೆಲಸ ಬಿಟ್ಟು ಇಲ್ಲಿ ಹೆಚ್ ಡಿಕೆ ಪರ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರು ಲೋಕಾಯುಕ್ತ ಹಾಗೂ ಬಳ್ಳಾರಿ ಲೋಕಾಯುಕ್ತ ಕಛೇರಿಗೆ ಎಂಎಲ್ ಸಿ ಎಸ್ ರವಿ ದೂರು ನೀಡಿದ್ದಾರೆ. ಈ ಹಿಂದೆ ರಾಮನಗರದಲ್ಲಿ ಕಾರ್ಯ ನಿರ್ವಹಿಸಿದ್ದ ಪುರುಷೋತ್ತಮ್, ಅದೇ ಕಾರಣಕ್ಕೆ ಕೆಲಸ ಬಿಟ್ಟು ಬಂದು ಇಲ್ಲಿ ಹೆಚ್ ಡಿಕೆ ಪರ ಕೆಲಸ ಮಾಡುತ್ತಿದ್ದಾರೆ ಎಂದು ರವಿ ಆರೋಪಿಸಿದ್ದಾರೆ.