ನಾನಾ ರಾಜ್ಯಗಳಿಂದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ರಾಷ್ಟ್ರ ರಾಜಧಾನಿಗೆ ಬಂದು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯ ಮೇಲೆ ರೈತರ ರ್ಯಾಲಿಗೆ ಅನುಮತಿಯಿದ್ದರೂ ಕೂಡ ಅದಕ್ಕೂ ಮೊದಲೇ ಹೊರಟಿದ್ದರಿಂದ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ನುಗ್ಗಿ ರೈತರು ಬಂದಿದ್ದರಿಂದ ಘರ್ಷಣೆಯ ವಾತಾವರಣ ಉಂಟಾಯಿತು.
Farmers break through a police barricade on a highway in western Uttar Pradesh’s Baghpat#FarmersProtest pic.twitter.com/tRVwRsK1R5
— NDTV Videos (@ndtvvideos) January 25, 2021
ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದ ಕೆಲವು ಸದಸ್ಯರು ಬ್ಯಾರಿಕೇಡ್‌ಗಳನ್ನು ಮುರಿದಿದ್ದಾರೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸದಸ್ಯರೊಬ್ಬರು ತಿಳಿಸಿದ್ದಾರೆ. ಕೆಎಸ್‌ಎಂ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ 41 ರೈತ ಸಂಘಗಳ ಒಕ್ಕೂಟವಾಗಿದೆ. ಇನ್ನು ಸಿಂಘು ಮತ್ತು ಟಿಕ್ರಿ ಗಡಿಭಾಗದಲ್ಲಿ ಪೊಲೀಸ್ ಬ್ಯಾರಿಕೇಡ್ ಮುರಿದು ಹೋಗಲು ಪ್ರಯತ್ನಿಸಿದವರ ಮೇಲೆ ಪೊಲೀಸರು ಅಶ್ರವಾಯು, ಲಾಠಿಚಾರ್ಜ್ ಪ್ರಯೋಗಿಸಿದ್ದಾರೆ.
The brutality of the @DelhiPolice !!
The Delhi Police attacks peaceful farmers ! The world is WATCHING!#TractorsRally #TractorParade #FarmersProtest pic.twitter.com/05XtjwLV2u
— ravinder singh (@RaviSinghKA) January 26, 2021
ರಾಜಪಥ್ನಲ್ಲಿ ಗಣರಾಜ್ಯೋತ್ಸವ ಮುಗಿದ ಬಳಿಕವಷ್ಟೆ ತಮಗೆ ಟ್ರ್ಯಾಕ್ಟರ್ ನಲ್ಲಿ ಹೋಗಲು ಅನುಮತಿ ನೀಡಲಾಗಿದೆ ಎಂದು ಪೊಲೀಸರು ರೈತರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅವರ ಮಾತು ಕೇಳದೆ ಮುನ್ನುಗ್ಗಿದ್ದರಿಂದ ಪೊಲೀಸರು ಅಶ್ರುವಾಯು, ಲಾಠಿಚಾರ್ಜ್ ನಡೆಸಿದ್ದಾರೆ.