ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದು, ಅವರನ್ನು ಬೆಂಬಲಿಸಿ ರಾಜ್ಯದ ರೈತರು ಕೂಡ ರ್ಯಾಲಿ ನಡೆಸಲು ಸಜ್ಜಾಗಿದ್ದಾರೆ.
ಆದ್ರೆ ಬೆಂಗಳೂರಿಗೆ ಟ್ರ್ಯಾಕ್ಟರ್ ಬರೆದಂತೆ ಪೊಲೀಸರು ತಡೆದಿದ್ದಾರೆ. ಹೀಗಾಗಿ ಸಾಂಕೇತಿಕ ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ ನೀಡುವ ಸಾಧ್ಯತೆಯಿದೆ. ರ್ಯಾಲಿಯಲ್ಲಿ 50 ರಿಂದ 70 ಟ್ರ್ಯಾಕ್ಟರ್ ಗಳಿಗೆ ಮಾತ್ರ ಅನುಮತಿ ನೀಡಬಹುದು ಎಂದು ಹೇಳಲಾಗಿದೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ರಾಜ್ಯದಲ್ಲೂ ಭಾರೀ ಬೆಂಬಲ ವ್ಯಕ್ತವಾಗಿದ್ದು, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ರೈತರು ಇಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ನಡೆಸಲು ಮುಂದಾಗಿದ್ದಾರೆ. ತುಮಕೂರು ರಸ್ತೆ ನೈಸ್ ರೋಡ್ ಜಂಕ್ಷನ್ ನಲ್ಲಿ ಖಾಸಗಿ ವಾಹನಗಳಲ್ಲಿ ಬಂದ ರೈತರು ಜಮಾವಣೆಗೊಂಡಿದ್ದಾರೆ. ಬಿಡದಿ ಬಳಿ ಟ್ರ್ಯಾಕ್ಟರ್ ರ್ಯಾಲಿಗೆ ರೈತರಿಂದ ಸಿದ್ಧತೆ ಕೈಗೊಳ್ಳಲಾಗಿದೆ 170 ಟ್ರ್ಯಾಕ್ಟರ್, 1000 ಕ್ಕೂ ಹೆಚ್ಚು ವಾಹನಗಳು ಭಾಗಿಯಾಗಲು ಆಗಮಿಸಿವೆ.
ಇದನ್ನೂ ಓದಿ: ಅತಿಯಾದ ಮೂಡನಂಬಿಕೆಯಿಂದ ಪೋಷಕರೇ ತಮ್ಮ ಮಕ್ಕಳ ಪ್ರಾಣತೆಗೆದಿದ್ದಾರೆ. ದಾರುಣ ಘಟನೆಯ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.!
ಮಂಡ್ಯ ಜಿಲ್ಲೆಯಲ್ಲಿ ಮೂರು ಟ್ರ್ಯಾಕ್ಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ ಮೈಸೂರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಪೊಲೀಸರು ತಡೆ ನೀಡಿದ್ದಾರೆ. ರಾಜ್ಯದ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಟ್ರ್ಯಾಕ್ಟರ್ ಬರದಂತೆ ತಡೆ ನೀಡಲು ಸೂಚನೆ ನೀಡಲಾಗಿದೆ. ಆದರೆ, ರೈತರು ಟ್ರ್ಯಾಕ್ಟರ್ ಮಾತ್ರವಲ್ಲದೇ ವಿವಿಧ ವಾಹನಗಳಲ್ಲಿ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆಯಿಂದ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.