ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಮೊದಲ ಬಾರಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವಕ್ಕೆ ಮೈದಾನದಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಂದಾಯ ಇಲಾಖೆಯಿಂದ ಗಣರಾಜ್ಯೋತ್ಸವ ಆಚರಣೆ ನಿರ್ಧಾರ ಮಾಡಿದೆ.
ಮೈದಾನ ಸ್ವಚ್ಛ ಮಾಡಿ ಬ್ಯಾರಿಕೇಡ್ಗಳ ಅಳವಡಿಕೆ ಮಾಡಲಾಗುತ್ತದೆ. ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಭದ್ರತೆ ಪರಿಶೀಲನೆ ಮಾಡಿದೆ. 2 KSRP ವಾಹನ ಸೇರಿ 30ಕ್ಕೂ ಹೆಚ್ಚು ಪೊಲೀಸರ ಭದ್ರತೆ, ಅಹಿತಕರ ಘಟನೆ ನಡೆಯದಂತೆ ಮೈದಾನದ ಸುತ್ತ ಭದ್ರತೆ ಮಾಡಲಾಗುತ್ತಿದೆ. ಪೊಲೀಸರು ಸಿಸಿಟಿವಿ, ಲೈಟಿಂಗ್ಸ್ ಅಳವಡಿಕೆ ಮಾಡಿದ್ದಾರೆ. ಉಪ ವಿಭಾಗಾಧಿಕಾರಿ-ಧ್ವಜಾರೋಹಣ ಮಾಡಲಿದ್ದಾರೆ. ಯಾವುದೇ ಪಾಸ್, ಆಹ್ವಾನ ಇಲ್ಲದೇ ಜನ ಪಾಲ್ಗೊಳ್ಳಬಹುದಾಗಿದೆ.
ಇದನ್ನೂ ಓದಿ : ‘ಬಿಗ್ ಬಾಸ್’ ಸುಂದರಿಯರ ಜೊತೆ ರಾಕೇಶ್ ಅಡಿಗ… ಆದ್ರೆ ಸೋನು ಮಿಸ್ಸಿಂಗ್..!