ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಇಂದು ಬಳ್ಳಾರಿಯ ತಮ್ಮ ನಿವಾಸದಲ್ಲಿ ವರಮಹಾಲಕ್ಷ್ಮೀಯ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಪೂಜೆಯಲ್ಲಿ ಪಾಲ್ಗೊಂಡಿದ್ದ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಸಿಕ್ಕಿದ್ದರೂ ಸಹ ತಮ್ಮ ಸ್ವಂತ ಊರಾದ ಬಳ್ಳಾರಿಗೆ ತೆರಳಲು ಕೋರ್ಟ್ ಅನುಮತಿ ನೀಡಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಕೊನೆಗೂ ರಿಲೀಫ್ ಸಿಕ್ಕಿದ್ದು, ಗುರುವಾರ ಸುಪ್ರೀಂ ಕೋರ್ಟ್ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿತ್ತು.
ಇನ್ನೂ ಓದಿ: #FlashNews ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್… ಬಳ್ಳಾರಿಗೆ ತೆರಳಲು ಷರತ್ತು ಬದ್ಧ ಅನುಮತಿ ನೀಡಿದ ಸುಪ್ರೀಂ ಕೋರ್ಟ್