ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ, ಗಾನ ಗಂಧರ್ವರೆಂದೇ ಖ್ಯಾತರಾಗಿದ್ದ ಪದ್ಯಾಣ ಗಣಪತಿ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಣಪತಿ ಭಟ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದರು.
ಇಂದು ಬೆಳಿಗ್ಗೆ 7.30ಕ್ಕೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಪದ್ಯಾಣ ಗಣಪತಿ ಭಟ್ರು 40 ವರ್ಷಗಳಿಂದ ಯಕ್ಷಗಾನ ಭಾಗವತಿಕೆ ಮಾಡಿಕೊಂಡಿದ್ದು, ಸುರತ್ಕಲ್, ಕರ್ನಾಟಕ, ಹೊಸನಗರ, ಎಡನೀರು, ಹನುಮಗಿರಿ ಸೇರಿದಂತೆ ಹಲವು ಯಕ್ಷಗಾನ ಮೇಳದಲ್ಲಿ ಭಾಗವತರಾಗಿದ್ದರು. ತಮ್ಮ 16 ನೇ ವಯಸ್ಸಿಗೆ ಭಾಗವತ ಪ್ರಾರಂಭಿಸಿದ್ದ ಪದ್ಯಾಣ ಗಣಪತಿ ಭಟ್ಟರು ಹಲವು ಮೇರು ಕಲಾವಿದರ ಒಡನಾಟ ಹೊಂದಿದ್ದು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪದ್ಯಾಣ ಗಣಪತಿ ಭಟ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ:ಮನೆಗೆ ನುಗ್ಗಿದ ಮಳೆ ನೀರು ಹೊರಹಾಕುವಾಗ ಶಾರ್ಟ್ ಸರ್ಕ್ಯೂಟ್…! ಕೆಪಿ ಅಗ್ರಹಾರದಲ್ಲಿ ಓರ್ವ ಬಲಿ..!