ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫ್ಯಾನ್ಸ್ಗೆ ಗುಡ್ನ್ಯೂಸ್ . ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸಿನಿಮಾದ ಪೋಸ್ಟರ್ ನಾಳೆ ರಿಲೀಸ್ ಆಗುತ್ತಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ 3 ತಿಂಗಳು ಕಳೆದರೂ ಅವರ ನೆನಪು ಅಭಿಮಾನಗಳ ಮನದಲ್ಲಿ ಕಡಿಮೆಯಾಗುತ್ತಿಲ್ಲ. ಈ ನಡುವೆ ಅಪ್ಪು ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಕೊನೆಯ ಚಿತ್ರ ಜೇಮ್ಸ್ ಶೂಟಿಂಗ್ ಕಂಪ್ಲೀಟ್ ಆಗಿದೆ. ಗಣರಾಜ್ಯೋತ್ಸವ ವಿಶೇಷವಾಗಿ ನಾಳೆ ಬೆಳಗ್ಗೆ 11-11ಕ್ಕೆ ಸಿನಿಮಾದ ಪೋಸ್ಟರ್ ರಿಲೀಸ್ ಆಗಲಿದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ…