ಬೆಂಗಳೂರು: ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್ ನೀಡಿದ್ದು, ಕಂಡೀಷನ್ಸ್ ಮೇಲೆ ಗಣೇಶೋತ್ಸವಕ್ಕೆ ಸರ್ಕಾರದ ಅಸ್ತು ಎಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸಚಿವ ಆರ್.ಅಶೋಕ್ ಮಾತನಾಡಿದ್ದು, ರಾಜ್ಯಾದ್ಯಂತ ಗಣೇಶ್ ಹಬ್ಬ ಆಚರಣೆಗೆ ಅವಕಾಶ ನೀಡಲಾಗಿದೆ, ಗಣೇಶ ಕೂರಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ. ನಗರ ಪ್ರದೇಶದಲ್ಲಿ ವಾರ್ಡ್ಗೆ 1 ಗಣಪತಿ ಪ್ರತಿಷ್ಠಾಪಿಸಬೇಕು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತಿಲ್ಲ. ಗಣೇಶೋತ್ಸವ ವೇಳೆ ಯಾವುದೇ ಮೆರವಣಿಗೆ ಸಹ ಮಾಡಬಾರದು, ಐದು ದಿನದೊಳಗೆ ಗಣೇಶ ವಿರ್ಸಜನೆ ಮಾಡಬೇಕು ಎಂದು ಹೇಳಿದ್ದಾರೆ.