ಕೋಲಾರ : ಸರ್ಕಾರಿ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದ ಹಿನ್ನೆಲೆ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆಯು ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಬಳೆಚಂಗಪ್ಪ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು , ಮುಖ್ಯ ಶಿಕ್ಷಕಿ ಉಮಾದೇವಿ ಅವರ ಅನುಮತಿ ಮೇರೆಗೆ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದರು. ಶಾಲೆಯಲ್ಲಿ ನಮಾಜ್ ಮಾಡಲು ಅನುಮತಿ ಕೊಟ್ಟಿದ್ದಕ್ಕೆ ಮುಳಬಾಗಿಲು ಬಿಇಓ ಗಿರಿಜೇಶ್ವರಿ ದೇವಿ ಅವರು ಮುಖ್ಯ ಶಿಕ್ಷಕಿ ಉಮಾದೇವಿ ಅವರನ್ನು ಅಮಾನತು ಮಾಡಿ ತನಿಖೆ ಮುಂದುವರೆಸುತ್ತಿದ್ದಾರೆ.

ಇದನ್ನೂ ಓದಿ : ಪ್ಯಾನ್ ಇಂಡಿಯಾ ಅಖಾಡಕ್ಕೆ ಶಿವಣ್ಣ..! 70ರ ದಶಕದ ಭೂಗತಲೋಕದ ಕಥೆಯಲ್ಲಿ ಸೆಂಚುರಿ ಸ್ಟಾರ್..!