ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಹೊಂದಿರುವ ಪಶು ಸಂಜೀವಿನಿ ವಾಹನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು. ಸಚಿವ ಪ್ರಭು ಚೌಹಾಣ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ವಿಧಾನಸೌಧದಲ್ಲಿ ಮಾತನಾಡಿದ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾನ್ ಕ್ಯಾಬಿನೆಟ್ ಪುನಾರಚನೆ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಸಂಪುಟದಿಂದ ನನ್ನ ಹೆಸರು ಕೈ ಬಿಡುವ ಸುದ್ದಿ ಸುಳ್ಳು. ಈ ಸಂಬಂಧ ನನ್ನ ಜೊತೆ ಬಿಎಸ್ವೈ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ದೇಶದ ಟಾಪ್ ಟೆನ್ ಸ್ವಚ್ಚ ನಗರಿಯಲ್ಲಿ ಮೈಸೂರು ! ಪ್ರಧಾನಿ ಜೊತೆ ಸಂವಾದ ನಡೆಸುವ ಸಾಂಸ್ಕೃತಿಕ ನಗರದ ಪೌರಕಾರ್ಮಿಕರು !
ರಾಜ್ಯದಲ್ಲಿ ಗೋವಿನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯ ನಿಷೇಧ ಕಾಯ್ದೆ ಜಾರಿಗೆ ಸರಕಾರ ಚಿಂತನೆ ನಡೆಸುತ್ತಿದೆ. ಮುಂಗಾರು ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತರುವ ಯೋಚನೆಯಿದೆ. ಎಂದು ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಗಲಭೆಕೋರರನ್ನು ಟೆರರಿಸ್ಟ್ ಎಂದು ಘೋಷಣೆ ? ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆಕೋರರಿಗೆ ಶಾಕ್ ! ಬೆಂಕಿ ಕೇಸ್ ಎನ್ಐಎಗೆ ಹಸ್ತಾಂತರ ?
ರಾಜ್ಯದಲ್ಲಿ ಗೋ ರಕ್ಷಣೆಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಜಿಲ್ಲೆಗಳಿಗೆ ವಾಹನ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಚೌಹಾಣ್ ಹೇಳಿದ್ದಾರೆ. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು 15 ಪಶು ಸಂಜೀವಿನಿ ವಾಹನಗಳಿಗೆ ಸಿಎಂ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.