ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜಾರೋಹಣ ನೆರವೇರಲಿದೆ. ಹಿಂದೂ ಸಂಘಟನೆಗಳು ಮತ್ತು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಗಣರಾಜ್ಯೋತ್ಸವ ಆಚರಿಸಲು ಅನುಮತಿ ಕೇಳಿತ್ತು. ಹೀಗಾಗಿ ಅಧಿಕಾರಿಗಳ ಜತೆ ಚರ್ಚೆ ಮಾಡಿದ ಕಂದಾಯ ಸಚಿವ ಆರ್.ಅಶೋಕ್ ಯಾವುದೇ ಗೊಂದಲಕ್ಕೆ ಅವಕಾಶ ಆಗದಂತೆ ಸರ್ಕಾರದಿಂದಲೇ ಧ್ವಜಾರೋಹಣ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ಸರ್ವೇ ನಂಬರ್ 40 ಗುಟ್ಟಹಳ್ಳಿ ಚಾಮರಾಜಪೇಟೆ ಮೈದಾನದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವದ ಆಚರಣೆ ಮಾಡಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗಿದೆ.
ರಾಜ್ಯ ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ನಡೆಯಲಿದ್ದು, ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡಬೇಕೆಂದು ಆದೇಶ ಮಾಡಿದ್ದೇನೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.