ಬೆಂಗಳೂರು; BBMPಗೆ ಎಲೆಕ್ಷನ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕಾನೂನು ತಜ್ಞರ ಜತೆ ಸಿಎಂ ಮೀಟಿಂಗ್ ನಡೆಸಲಿದ್ದಾರೆ. ಸುಪ್ರೀಂ ಕೋರ್ಟ್ ಎರಡು ತೀರ್ಪಿನ ಬಗ್ಗೆ ಚರ್ಚೆ ಮಾಡುತ್ತೇವೆ, ಒಬಿಸಿ ಮೀಸಲಾತಿ ಇಟ್ಟುಕೊಂಡೇ ಚುನಾವಣೆ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇವಾಗ ೧೧ ಗಂಟೆಗೆ ಸಭೆ ಮಾಡ್ತಿದ್ದೇವೆ, ಕಾನೂನು ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಸುಪ್ರೀಂ ಕೋರ್ಟ್ ಎರಡು ತೀರ್ಪಿನ ಬಗ್ಗೆ ಚರ್ಚೆ ಮಾಡುತ್ತೇವೆ, ಒಬಿಸಿ ಮೀಸಲಾತಿ ಇಟ್ಟುಕೊಂಡೇ ಚುನಾವಣೆ ಮಾಡಬೇಕು ಎಂದು ಹೇಳಿದ್ದಾರೆ.