ಮುಂಬೈ: ವಾಂಖಡೆ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಫ್ ತಲುಪಲು ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬಹುದಾಗಿದೆ. ಆರ್ ಸಿ ಬಿ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಮೊಹಮ್ಮದ್ ಸಿರಾಜ್ ಬದಲು ಸಿದ್ದಾರ್ಥ್ ಕೌಲ್ ಕಣಕ್ಕಿಳಿಯಲಿದ್ದಾರೆ.
ಇನ್ನು ಈಗಾಗಲೇ 20 ಪಾಯಿಂಟ್ ಗಳ ಮೂಲಕ ಪಾಯಿಂಟ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ಗೆ ಕ್ವಾಲಿಫೈ ಆಗಿದೆ. ಈ ಪಂದ್ಯ ಗುಜರಾತ್ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ.
.@gujarat_titans have won the toss and they will bat first against #RCB
Live – https://t.co/XDXRjk2XBc #RCBvGT #TATAIPL pic.twitter.com/ruWHoEqfsL
— IndianPremierLeague (@IPL) May 19, 2022
ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿ.ಕೀ.), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಸಿದ್ದಾರ್ಥ್ ಕೌಲ್, ಜೋಶ್ ಹ್ಯಾಜಲ್‌ವುಡ್
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿ.ಕೀ.), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
Match 67.Royal Challengers Bangalore XI: F du Plessis (c), R Patidar, V Kohli, G Maxwell, D Karthik (wk), W Hasaranga, M Lomror, J Hazlewood, S Ahmed, H Patel, S Kaul. https://t.co/XDXRjjLUzc #RCBvGT #TATAIPL #IPL2022
— IndianPremierLeague (@IPL) May 19, 2022