ಹಾಸನ : ಹಾಸನದ ವಿದ್ಯಾನಗರದಲ್ಲಿ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಪ್ರಕರಣ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಗಂಡನ ಮನೆಯವರೇ ಹತ್ಯೆ ಮಾಡಿ ನೇಣು ಹಾಕಿದ್ದಾರೆ ಎಂದು ಮಹಿಳೆ ಸಂಬಂಧಿಕರು ಆರೋಪ ಮಾಡಿದ್ದಾರೆ.
ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದ 31 ವರ್ಷದ ರಂಜಿತಾರನ್ನು ಹಾಸನದ ಅಕ್ಷಯ್‌ಗೆ ಮದುವೆ ಮಾಡಿ ಕೊಡಲಾಗಿತ್ತು. ಅಕ್ಷಯ್ ತಂದೆ-ತಾಯಿ ಸೊಸೆಗೆ ಕಿರುಕುಳ ನೀಡಿದ್ದಾರೆ ಎಂದು ರಂಜಿತಾ ಕುಟುಂಬ ಆರೋಪಿಸಿದೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಘಟನಾ ಸ್ಥಳದಲ್ಲಿ ಪತಿ-ಪತ್ನಿ ಕಡೆಯವರ ನಡುವೆ ಮಾರಾಮಾರಿ ನಡೆದಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಬಾವ ಡಾ. ಬಿ ಯಶೋವರ್ಮ ವಿಧಿವಶ…!