ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕುಸಿತದಿಂದ ರಾಜ್ಯದ ವಿವಿಧೆಡೆ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹೀಗಾಗಿ ಕೆಲ ಜಿಲ್ಲೆಗಳಿಗೆ ಹೈ ಆಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಭಾರಿ ಮಳೆ ಸಂಭವ ಸಾಧ್ಯತೆಗಳಿದ್ದು, ಕರಾವಳಿ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ , ಕೊಪ್ಪಳ , ಯಾದಗಿರಿ , ಬಾಗಲಕೋಟ, ಜೆಲ್ಲೆಗಳಿಗೆ ಆರೆಂಜ್ ಅಲರ್ಟ್ ಏರಲಾಗಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:#Flashnews ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆ… ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ..