ಬೆಂಗಳೂರು: ಬೆಂಗಳೂರಿನಲ್ಲಿ ಇನ್ನು 2 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ.. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇನ್ನು 2 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ಇನ್ನು, ಗ್ರಾಮಾಂತರ ಜಿಲ್ಲೆಗೆ ನಾಳೆ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರ್ನಾಟಕದಾದ್ಯಂತ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನ. 19 ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳು ಸೇರಿ ಪಶ್ಚಿಮ ಘಟ್ಟದ ಎಲ್ಲಾ ಜಿಲ್ಲೆಗಳಿಗೆ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.