ಮಹಾರಾಷ್ಟ್ರ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗ್ತಿದ್ದು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬರ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ರಾಜ್ಯಕ್ಕೆ ಪ್ರವಾಹದ ಭೀತಿ ಉಂಟಾಗಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ 103 ಟಿಎಂಸಿ ಗಳಷ್ಟು ಭರ್ತಿಯಾಗಿದೆ. ಸದ್ಯ ಕೊಯ್ನಾ ಜಲಾನಯನ ಪ್ರದೇಶದಲ್ಲಿ 57 ಮಿ.ಮೀ ಮಳೆಯಾಗಿದೆ. ಮುಂದಿನ 4 ದಿನಗಳ ಕಾಲ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.