ಬೆಂಗಳೂರು : ಹೆಬ್ಬಾಳ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದ ಹಿನ್ನೆಲೆ ಇಂದಿನಿಂದ ಸರಕು ವಾಹನ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಿಗ್ಗೆ 8:30 ರಿಂದ ರಾತ್ರಿ 10:30 ರ ವರೆಗೆ ನಿರ್ಬಂಧಿಸಲಾಗಿದೆ.
ಒಂದು ತಿಂಗಳ ಕಾಲ ಪ್ರಯೋಗಿಕವಾಗಿ ನಿರ್ಬಂಧಿಸಲಾಗಿದ್ದು, ಏರ್ಪೋರ್ಟ್ ಹೋಗುವವರು ರಸ್ತೆ ಮಾರ್ಗವನ್ನೇ ಅವಲಂಬಿಸಿದ್ದಾರೆ. ಇಲ್ಲಿ ಪೀಕ್ ಟೈಮ್ ನಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆಗುತ್ತಿದೆ. ಇದರಿಂದ ಹಲವರಿಗೆ ಬಾರಿ ತೊಂದರೆ ಆಗುತ್ತಿರುವ ಹಿನ್ನಲೆ ಪ್ರಾಯೋಗಿಕವಾಗಿ ಸರಕು ವಾಹನಗಳಿಗೆ ನಿರ್ಬಂಧಿಸುವಂತೆ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಎಂ ಎ ಸಲೀಂ ಆದೇಶ ನೀಡಿದ್ದಾರೆ.
ಇದನ್ನೂ ಓದಿ : ಸುಕೃತ ಜೊತೆ ಶೈನ್ ಶೆಟ್ಟಿ ಮದುವೆ…!