ಬೆಂಗಳೂರು: ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಯೋಜನೆಯಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್’ ಪ್ರಾರಂಭಿಸಲು ಸರ್ಕಾರ 53 ಕೋಟಿ ರೂ. ಬಿಡುಗಡೆ ಮಾಡಿದೆ. ಈಗ ಈ ಕ್ಲಿನಿಕ್‌ಗಳಲ್ಲಿ ಕರ್ತವ್ಯ ನಿರ್ವಹಿಸಲು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನ ಎನ್ ಆರ್ ಚೌಕದಲ್ಲಿರುವ ಬಿಬಿಎಂಪಿ ಕೇಂದ್ರ ಕಚೇರಿಯ ನೌಕರರ ಸಭಾಂಗಣದಲ್ಲಿ ಆಗಸ್ಟ್ 10 ಮತ್ತು 11 ರಂದು ವಾಕ್ ಇನ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಎರಡೂ ದಿನವೂ ಬೆಳಗ್ಗೆ 10.30ರಿಂದ ಸಂಜೆ 4.30ರವರೆಗೆ ಈ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಕನಿಷ್ಢ 18 ವರ್ಷಗಳು ತುಂಬಿರಬೇಕು. ಸಾಮಾನ್ಯ ವರ್ಗದವರ ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು. 2ಎ, 2ಬಿ, 3ಎ ಮತ್ತು 3ಬಿ ವರ್ಗದವರಿಗೆ 38 ವರ್ಷ ಮೀರಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ವರ್ಗ 1ರ ಅರ್ಜಿದಾರರ ವಯಸ್ಸು 40 ವರ್ಷ ಮೀರಿರಬಾರದು. ಅಲ್ಲದೆ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯ.
ಇದನ್ನೂ ಓದಿ: ಕರ್ನಾಟಕ ಪಬ್ಲಿಕ್ ಕಾಲೇಜಿನ ಮೇಲ್ಚಾವಣಿ ಕುಸಿತ… ಮೂರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ…