ದಾವಣಗೆರೆ: ಚಿಕನ್ ಸಾರು ಮಾಡಿಲ್ಲವೆಂದು ಹೆಂಡತಿಯೊಂದಿಗೆ ಜಗಳ ತೆಗೆದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಆಕೆಯನ್ನು ಕೊಲೆ ಮಾಡಿದ್ದಾನೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. 28 ವರ್ಷದ ಪತ್ನಿ ಶೀಲಾಳನ್ನು ಕೆಂಚಪ್ಪ ಎಂಬಾತ ಕೊಲೆ ಮಾಡಿದ್ದಾನೆ. ರೋಡ್ ರೋಲರ್ ಅಪರೇಟರ್ ಆಗಿರುವ ಕೆಂಚಪ್ಪ ಮೊದಲ ಹೆಂಡತಿಗೆ ಮಕ್ಕಳಾಗಲಿಲ್ಲ ಎಂದು ಎರಡನೇ ಮದುವೆ ಮಾಡಿಕೊಂಡಿದ್ದ. ಆತ 9 ವರ್ಷದ ಹಿಂದೆ ಶೀಲಾಳನ್ನು ಪ್ರೀತಿಸಿ ಮದುವೆಯಾಗಿದ್ದ.
ಇದನ್ನೂ ಓದಿ: ವರ್ತೂರು ಪ್ರಕಾಶ್ ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ… ಎಸ್. ಮುನಿಸ್ವಾಮಿ…
ಆದರೆ ಇತ್ತೀಚೆಗೆ ಶೀಲಾ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕೆಂಚಪ್ಪ ಆಕೆಯೊಂದಿಗೆ ಜಗಳವಾಡುತ್ತಿದ್ದ. ನಿನ್ನೆ ರಾತ್ರಿ ಚಿಕನ್ ಸಾರು ಮಾಡ್ಲಿಲ್ಲ ಎಂದು ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಗಲಾಟೆ ತಾರಕಕ್ಕೇರಿ ಆತ ಚಾಕುವಿನಿಂದ ಪತ್ನಿ ಶೀಲಾಳನ್ನ ಕೊಂದಿದ್ದಾನೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೆಂಚಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.