ಹುಬ್ಬಳ್ಳಿ: ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ ಎಂದು ನಾಪತ್ತೆಯಾಗಿರುವ 8 ಹುಬ್ಬಳ್ಳಿ ಪುಂಡರಿಗೆ ಪೊಲೀಸ್ ಡೆಡ್‌ಲೈನ್ ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಶಾಂತಿ ಕದಡಿದವರ ಬಂಧನಕ್ಕೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದು, ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಕರಣ ಸಂಬಂಧ ಈವರೆಗೆ 108 ಕಿಡಿಗೇಡಿಗಳನ್ನು ಬಂಧಿಸಲಾಗಿದೆ. 12 ಎಫ್‍ಐಆರ್ ದಾಖಲಾಗಿದೆ. ಇದರಲ್ಲಿ 6 ಮಂದಿ ರೌಡಿಶೀಟರ್‌ಗಳು, 10 ಅಪ್ರಾಪ್ತರು ಸೇರಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಹಿನ್ನೆಲೆ ಎಲ್ಲರನ್ನು ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಗಲಭೆಗೆ 4 ಮಂದಿ ಪ್ರಚೋದನೆ ನೀಡಿದ್ದು ಇವರೇ ಗಲಭೆಗೆ ನೇರ ಕಾರಣ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದು, ನಾಪತ್ತೆಯಾಗಿರುವ ವಾಸೀಂ ಸೇರಿ 8 ಆರೋಪಿಗಳಿಗೆ ಪೊಲೀಸರು ಡೆಡ್‌ಲೈನ್ ಕೊಟ್ಟಿದ್ದಾರೆ. ಇಂದು ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ ಎಂದು ಖಡಕ್ ಸಂದೇಶ ನೀಡಿದ್ದಾರೆ.