ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ಮತ್ತೊಂದು ಶಾಲೆಯಲ್ಲಿ ಕೋವಿಡ್ ಸ್ಪೋಟಗೊಂಡಿದ್ದು, ಓರ್ವ ಶಿಕ್ಷಕ, 10 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಆತಂಕ ಹೆಚ್ಚಾಗಿದೆ.
ಕಾಫಿನಾಡು ಚಿಕ್ಕಮಗಳೂರಿನ ನರಸಿಂಹರಾಜಪುರ ತಾಲೂಕಿನ ಖಾಸಗಿ ಶಾಲೆಯಲ್ಲಿ ಕೊರೋನಾ ಬ್ಲಾಸ್ಟ್ ಆಗಿದ್ದು, ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಓರ್ವ ಶಿಕ್ಷಕ, 10 ಮಂದಿ ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಗಿದ್ದು, 1 ವಾರ ಶಾಲೆ ಸೀಲ್ಡೌನ್ ಮಾಡಲು ಡಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಲಾಗಿದ್ದು, ಆರೋಗ್ಯ ಇಲಾಖೆ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ವಾರದ ಹಿಂದಷ್ಟೇ ನವೋದಯ ಶಾಲೆಯಲ್ಲಿ ನೂರಾರು ಕೇಸ್ ಪತ್ತೆಯಾಗಿದ್ದು, ಇದೀಗ ಮತ್ತೊಂದು ಶಾಲೆಯಿಂದ ಇಡೀ ಜಿಲ್ಲೆಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ:ಮತದಾನ ಮಾಡಿದ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ…