ಲಂಡನ್: ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದ್ದು, 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇಂದಿನ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಸರಣಿಯನ್ನು ಜಯಿಸುವ ವಿಶ್ವಾಸದಲ್ಲಿದೆ. ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡಿದ್ದು, ಶ್ರೇಯಸ್ ಅಯ್ಯರ್ ರನ್ನು 11 ರ ಬಳಗದಿಂದ ಡ್ರಾಪ್ ಮಾಡಲಾಗಿದೆ.
ಇನ್ನು ಇಂಗ್ಲೆಂಡ್ ತಂಡ ಮೊದಲ ಪಂದ್ಯದ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಯೋಜನೆ ರೂಪಿಸಿಕೊಂಡಿದೆ.
2ND ODI. India won the toss and elected to field. https://t.co/N4iVtxbNBF #ENGvIND
— BCCI (@BCCI) July 14, 2022
ತಂಡಗಳು:
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್(ವಿ.ಕೀ.), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿ.ಕೀ./ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ