ದುಬೈ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ . ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಏಷ್ಯಾಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಎದುರಿಸುತ್ತಿದೆ. ಇನ್ನು ಕಳೆದ ವರ್ಷ ದುಬೈ ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡ ಟೀಂ ಇಂಡಿಯಾವನ್ನು 10 ವಿಕೆಟ್ ಅಂತರದಿಂದ ಸೋಲಿಸಿತ್ತು. ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಿದ್ಧವಾಗಿದೆ.
ಇನ್ನು ಈ ಟೂರ್ನಿ ವಿರಾಟ್ ಕೊಹ್ಲಿ ಪಾಲಿಗೆ ಮಹತ್ವದ್ದಾಗಿದ್ದು ಪಾಕಿಸ್ತಾನ ತಂಡದ ವಿರುದ್ಧ ಮಿಂಚುವ ಮೂಲಕ ಫಾರ್ಮ್ ಗೆ ಮರಳಲು ಕೊಹ್ಲಿ ಸಕಲ ಸಿದ್ಧತೆ ನಡೆಸಿದ್ದಾರೆ. ಕೊಹ್ಲಿ ಇಂದು 100ನೇ ಟಿ20 ಅಂತರಾಷ್ಟ್ರೀಯ ಪಂದ್ಯವನ್ನಾಡಲಿದ್ದಾರೆ. ಇದೇ ವೇಳೆ ಗಾಯದ ಸಮಸ್ಯೆಯಿಂದ ಹಲವು ತಿಂಗಳಿಂದ ತಂಡದಿಂದ ಹೊರಗಿದ್ದ ಕೆ.ಎಲ್. ರಾಹುಲ್ ತಂಡಕ್ಕೆ ಮರಳಿದ್ದು, ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Captain @ImRo45 has won the toss and we will bowl first against Pakistan.
A look at our Playing XI for the game.
Live – https://t.co/o3hJ6VNfwF #INDvPAK #AsiaCup2022 pic.twitter.com/O0HQXFQzC4
— BCCI (@BCCI) August 28, 2022
ಇನ್ನು ಪಾಕಿಸ್ತಾನ ತಂಡ ಯುಎಇ ನಲ್ಲಿ ಆಡಿರುವ 17 ಪಂದ್ಯಗಳ ಪೈಕಿ 16 ಪಂದ್ಯಗಳಲ್ಲಿ ಗೆದ್ದಿದ್ದು, ಯುಎಇ ನಲ್ಲಿ ತನ್ನ ಉತ್ತಮ ಪ್ರದರ್ಶನ ಮುಂದುವರೆಸುವ ಉತ್ಸಾಹದಲ್ಲಿದೆ.
ತಂಡಗಳು:
ಟೀಂ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿ.ಕೀ.), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿ.ಕೀ.), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ