ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾದರಿಯಲ್ಲಿ ನಡುಬಾಗಿಸಿ ನಮಸ್ಕಾರ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
ತಮ್ಮ ಪುತ್ರ ಯತೀಂದ್ರ ಅವರ ವರುಣಾ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್ ನ ಚಿಂತನಾ ಶಿಬಿರದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಂತೆ ನಡುಬಾಗಿಸಿ ನಮಸ್ಕರಿಸಿದ್ದಾರೆ. ಅವರು ನಡುಬಾಗಿಸಿ ನಮಸ್ಕರಿಸುವ ವಿಡಿಯೋ ವೈರಲ್ ಆಗಿದೆ.
ಇನ್ನು ಮೈಸೂರಿನಲ್ಲಿ 11 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲೇ ಬೇಕು ಎಂದು ಕಾಂಗ್ರೆಸ್ ನ ಮುಖಂಡರಿಗೆ ಕರೆ ನೀಡಿದರು.