ಬೆಂಗಳೂರು : ಎಲ್ಲಾ ಕನ್ನಡಿಗರಿಗೂ ನನ್ನ ನಮಸ್ಕಾರಗಳು, ಕರ್ನಾಟಕ ರಾಜ್ಯಕ್ಕೆ ಇಂದು ಮಹತ್ವದ ದಿನವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narenrda Modi) ಕನ್ನಡದಲ್ಲಿ ಭಾಷಣ ಆರಂಭಿಸಿದ್ಧಾರೆ. ಕನ್ನಡದಲ್ಲಿ ಭಾಷಣ ಆರಂಭಿಸುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.
ಕೊಮ್ಮಘಟ್ಟದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮೋದಿ ಕರ್ನಾಟಕ ರಾಜ್ಯಕ್ಕೆ ಇಂದು ಮಹತ್ವದ ದಿನವಾಗಿದೆ ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು.
ಇದನ್ನೂ ಓದಿ : ಕೊಮ್ಮಘಟ್ಟದಲ್ಲಿ ನಮೋ ಸಾರ್ವಜನಿಕ ಸಮಾವೇಶ… ವಿವಿಧ ಸರ್ಕಾರಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ ಮೋದಿ…