ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯ ಚುನಾವಣಾ ಆಯೋಗವು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ. 2022ರ ಅಂತ್ಯದೊಳಗೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ತಿಳಿಸಿದ್ಧಾರೆ.
www.bbmp.gov.in ನಲ್ಲಿ ಮತದಾರರ ಕರಡು ಪ್ರತಿ ಪ್ರಕಟವಾಗಿದೆ. ಸೆಪ್ಟೆಂಬರ್ 3 ರಿಂದ ಸೆಪ್ಟೆಂಬರ್ 9ರವರೆಗೆ ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೆಪ್ಟೆಂಬರ್ 16 ರ ಒಳಗೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಪಟ್ಟಿಯಲ್ಲಿ ಯಾವುದೇ ಲೋಪದೋಷ ಇದ್ದರೆ ಈಗಲೇ ಸರಿಪಡಿಸಿಕೊಳ್ಳಿ ಎಂದು ಬಸವರಾಜ್ ಅವರು ತಿಳಿಸಿದ್ಧಾರೆ.
198 ವಾರ್ಡ್ ಗಳಿಂದ 243 ವಾರ್ಡ್ ಗಳಿಗೆ ಬಿಬಿಎಂಪಿ ವ್ಯಾಪ್ತಿ ಹೆಚ್ಚಳವಾಗಿದೆ. ಒಟ್ಟು 79,08,394 ಮತದಾರರಿದ್ದು, 41,09,496 ಪುರುಷರು, 37,97,497 ಮಹಿಳೆಯರು, 1401 ತೃತೀಯ ಲಿಂಗಿಗಳು ಇದ್ದಾರೆ. ಒಂದು ವಾರ್ಡ್‌ನಲ್ಲಿ ಕನಿಷ್ಠ 18,604 ಗರಿಷ್ಠ51,653 ಮತದಾರರಿದ್ದಾರೆ. 2022ರ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. ಕೋರ್ಟ್ ನಲ್ಲಿ ಯಾವುದೇ ಆಕ್ಷೇಪಣೆ ಗಳು ಇದ್ದರೂ ಚುನಾವಣೆಗೆ ಅಡ್ಡಿಯಾಗೋದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ತಿಳಿಸಿದ್ದಾರೆ.