ಬೆಳಗಾವಿ : ಖಾನಾಪುರದಲ್ಲಿ ಅಗ್ನಿಪಥ್ ವಿರೋಧಿ ಹೋರಾಟ ನಡೆಸುತ್ತಿದ್ದು, ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ . ಜೂನ್ 20ರಂದು ಖಾನಾಪುರ ಬಂದ್ಗೂ ಕರೆ ನೀಡಿದ್ಧಾರೆ.
ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರದ ಮಲಪ್ರಭಾ ತಾಲೂಕು ಮೈದಾನದಲ್ಲಿ ಪ್ರೊಟೆಸ್ಟ್ ನಡೆಸಲಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ನೂರಾರು ಯುವಕರ ಆಕ್ರೋಶ ಹೊರಹಾಕುತ್ತಿದ್ದಾರೆ. ತಹಶಿಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆದಿದೆ. ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡಲು ಮನವಿ ಮಾಡಿಕೊಳ್ಳುತ್ತಿದ್ದಾರೆ. ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮೆರವಣಿಗೆ ನಡೆಸಲಾಗಿದೆ.
ಇದನ್ನೂ ಓದಿ : ಕೇಂದ್ರದ ಅಗ್ನಿಪಥ್ ಯೋಜನೆ ಅವೈಜ್ಞಾನಿಕ.. ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು : ಸಿದ್ದರಾಮಯ್ಯ…