ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಭೇಟಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ನಡೆಯುವ ನವ ಚಂಡಿಕಾಹೋಮ ಮತ್ತು ಮಹಾಪೂಜೆಯ ವಿಶೇಷ ಪೂಜೆಯಲ್ಲಿ ಸಚಿವರು ಭಾಗಿಯಾಗಿದ್ದಾರೆ. ದೇವಳದ ಆಡಳಿತ ಮಂಡಳಿ ಪೂರ್ಣ ಕುಂಭದೊಂದಿಗೆ ಸಚಿವರನ್ನು ಬರಮಾಡಿಕೊಂಡಿದ್ದಾರೆ. ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯ ನಡೆದಿದೆ. ದೇಗುಲದ ಸುತ್ತಮುತ್ತಲಿನಲ್ಲಿ ಪೋಲಿಸ್ ಇಲಾಖೆಯಿಂದ ಬಿಗಿಬಂದೋಬಸ್ತ್ ಮಾಡಲಾಗಿದೆ.
ವರದಿ : ಮಂಜುನಾಥ್
ಸ್ಥಳ : ಉಡುಪಿ
ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಆರೋಗ್ಯ ಮೇಳ…