ಬೆಂಗಳೂರು : ವಿಧಾನಪರಿಷತ್ ಸಭಾ ನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನಾಮ ನಿರ್ದೇಶನ ಮಾಡಲಾಗಿದೆ.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಈ ಹಿಂದೆಯೂ ಸಭಾ ನಾಯಕರಾಗಿ ಆಯ್ಕೆಯಾಗಿದ್ದರು . ವಿಧಾನಪರಿಷತ್ ಚುನಾವಣೆಯಲ್ಲಿ ಮರು ಆಯ್ಕೆಯಾದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಸಭಾಪತಿಯವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಭಾ ನಾಯಕರಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನ ನಾಮ ನಿರ್ದೇಶನ ಮಾಡಿದ್ದೇವೆ ಎಂದು ತಿಳಿಸಲಾಗಿದೆ.