ಬೆಂಗಳೂರು: ಕಾಂಟ್ರಾಕ್ಟರ್ ಆತ್ಮಹತ್ಯೆ ಕೇಸ್ ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ (K.S. Eshwarappa) ಮತ್ತೆ ಸಂಪುಟ ಸೇರ್ಪಡೆಗೆ ಕಸರತ್ತು ನಡೆಸುತ್ತಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಆರ್.ಟಿ. ನಗರದಲ್ಲಿರುವ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಮತ್ತು ಬೊಮ್ಮಾಯಿ ಅವರ ಭೇಟಿ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ಮಾಲೂರಿನಲ್ಲಿ ಹಾಲಿ-ಮಾಜಿ ಶಾಸಕರ ನಡುವೆ ವಾಕ್ ಸಮರ..! ಹಾಲಿ MLA ನಂಜೇಗೌಡರಿಗೆ ಮಂಜುನಾಥ್ ಗೌಡ ಸವಾಲ್..!
ರಾಜೀನಾಮೆ ನೀಡಿದ ಬಳಿಕ ಈಶ್ವರಪ್ಪ ಅವರು ತಮ್ಮ ಕ್ಷೇತ್ರದಲ್ಲೇ ಉಳಿದುಕೊಂಡಿದ್ದರು. ಅವರು ರಾಜೀನಾಮೆ ನೀಡಿದ ಬಳಿಕ ಕೇವಲ ಒಂದೆರಡು ಬಾರಿ ಮಾತ್ರ ಬೆಂಗಳೂರಿಗೆ ಬಂದಿದ್ದರು. ಇಂದು ಅವರು ಸಿಎಂ ರನ್ನು ಬೇಟಿ ಮಾಡಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಂಬಂಧ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಬೊಮ್ಮಾಯಿ ಅವರು ಇಂದು ಮತ್ತು ನಾಳೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಕುರಿತೂ ಚರ್ಚೆ ನಡೆಯುವ ಸಾಧ್ಯತೆಗಳಿವೆ.