ಬೆಳಗಾವಿ: ಡಿಸೆಂಬರ್ 10ರಂದು ವಿಧಾನ ಪರಿಷತ್‌ನ 25ಸ್ಥಾನಗಳಿಗೆ ಚುನಾವಣೆ ನಿಗಧಿಯಾಗಿದ್ದು, ಸಹೋದರ ಚನ್ನರಾಜ ಹಟ್ಟಿಹೊಳಿಗೆಗೆ ಕೈ ಟಿಕೆಟ್ ಕನ್ಫರ್ಮ್ ಆಗುತ್ತಿದ್ದಂತೆ ಲಕ್ಷ್ಮೀ ಹೆಬ್ಬಾಳ್ಕರ್ ಟೆಂಪಲ್ ರನ್ ಶುರುಮಾಡಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮವಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹುಟ್ಟುರಿನ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದು, ಇದಾದ ಬಳಿಕ ರಾಮದುರ್ಗ ತಾಲೂಕಿನ ತಮ್ಮ ಆರಾಧ್ಯದೈವ ಗೊಡಚಿ ವೀರಭದ್ರೇಶ್ವರ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.
ದೇವರಿಗೆ ಪೂಜೆ ಸಲ್ಲಿಸಿದ ಫೋಟೋವನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಹೋದರ ಚನ್ನರಾಜ ಹಟ್ಟಿಹೊಳಿಗೆ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿಯಿಂದ ಹಸಿರು ನಿಶಾನೆ ದೊರೆತ ಹಿನ್ನೆಲೆ ತವರುಮನೆ ಆರಾಧ್ಯದೈವ ವೀರಭದ್ರೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿಯಲ್ಲೂ ಶುರುವಾಯ್ತು ರಮೇಶ್ ಜಾರಕಿಹೋಳಿ ಬಂಡಾಯ ? ಪಕ್ಷ ಧಿಕ್ಕರಿಸಿ ಚುನಾವಣಾ ಪ್ರಚಾರಕ್ಕಿಳಿದ ಸಾಹುಕಾರ್!