ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 22 ನೇ ಸಿನಿಮಾ ಮದಗಜ ರಿಲೀಸ್ ಡೇಟ್ ನಾಳೆ ಅನೌನ್ಸ್ ಆಗಲಿದೆ. ನಾಳೆ ಸಂಜೆ 5.05 ಕ್ಕೆ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವುದಾಗಿ ಚಿತ್ರ ತಂಡ ತಿಳಿಸಿದೆ.
ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಮತ್ತು ಮಹೇಶ್ ಕುಮಾರ್ ನಿರ್ದೇಶನದ ಮದಗಜ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಫಸ್ಟ್ ಲುಕ್ ನಿಂದ ಸದ್ದು ಮಾಡುತ್ತಿದೆ. ದುಬಾರಿ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
Next Update Tomorrow at 5.05pm. #Madhagaja @umap30071 | @SRIMURALIII | @SMaheshDirector | @aanandaaudio pic.twitter.com/E6z5Hkfgn8
— Umapathy Films (@UmapathyFilms) September 30, 2021
ಈ ಸಿನಿಮಾದಲ್ಲಿ ವಾರಾಣಸಿ ಗ್ಯಾಂಗ್‌ಸ್ಟರ್ ಆಗಿ ನಟ ಶ್ರೀಮುರಳಿ ನಟಿಸಿದ್ದಾರೆ. 74 ದಿನಗಳ ಕಾಲ ಬೆಂಗಳೂರು, ಮೈಸೂರು, ಹೈದರಾಬಾದ್, ವಾರಾಣಸಿ ಮುಂತಾದ ಕಡೆ ಶೂಟಿಂಗ್ ಮಾಡಲಾಗಿದೆ. ಮೊದಲ ಬಾರಿಗೆ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ಪ್ರಮುಖ ಪಾತ್ರದಲ್ಲಿ ಜಗಪತಿ ಬಾಬು ಬಣ್ಣ ಹಚ್ಚಿದ್ದಾರೆ. ಉಳಿದಂತೆ, ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ‘ಮದಗಜ’ ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣವಿದ್ದು. ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ.