ನವದೆಹಲಿ: ತ್ರಿವಳಿ ತಲಾಖ್ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೇಶದಲ್ಲಿ ತ್ರಿವಳಿ ತಲಾಖ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ತಿಳಿಸಿದೆ.
ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಸಯ್ಯದ್ ಶೆಹಜಾದಿ ಅವರು ನಾನು ಮುಸ್ಲಿಂ ಮಹಿಳೆಯರೊಂದಿಗೆ ತ್ರಿವಳಿ ತಲಾಖ್ ಮತ್ತು ಇತರೆ ಸಮಸ್ಯೆಗಳ ಕುರಿತು ಮಾತುಕತೆ ನಡೆಸಿದ್ದೇನೆ. ತ್ರಿವಳಿ ತಲಾಖೆ ಕಾಯ್ದೆ ಜಾರಿಗೆ ಬಂದ ಬಳಿಕ ತಲಾಖ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಚುನಾವಣೆ ಹತ್ತಿರವಾಗ್ತಿದ್ದಂತೆ ಕಾಂಗ್ರೆಸ್, ಜೆಡಿಎಸ್ ಗೆ ಬಿಗ್ ಶಾಕ್… ಕೈ-ತೆನೆ ಪಕ್ಷ ತೊರೆದು ಬಿಜೆಪಿ ಸೇರಿದ ಮುಖಂಡರು…
2019 ರಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತ್ರಿವಳಿ ತಲಾಖ್ ನಿಷೇಧ ಕಾಯ್ದೆಗೆ ಅಂಕಿತ ಹಾಕಿದ್ದರು. ಈ ಕಾಯ್ದೆಯಲ್ಲಿ ತ್ರಿವಳಿ ತಲಾಖ್ ನೀಡುವುದು ಕ್ರಿಮಿನಲ್ ಅಪರಾಧವಾಗಿದ್ದು, 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿತ್ತು.