ಇಂದು ವಿಧಾನಸೌಧದ ಬಳಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿಟಿ ರವಿ ‘ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡಾ ಕ್ರಮ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು ನಾವು ಯಾರನ್ನೂ ಬಿಡೋ ಪ್ರಶ್ನೆಯೇ ಇಲ್ಲ’ ಎಂದು ಹೇಳುವುದರು ಮೂಲಕ ಪ್ರತಿ ಪಕ್ಷಗಳ ವಿರುದ್ಧ ಸಚಿವರು ಹರಿಹಾಯ್ದಿದ್ದಾರೆ.
ನಗರದಲ್ಲಿ ನಡೆದ ಗಲಭೆ ಕುರಿತು ಪ್ರತಿಕ್ರಿಯಿಸಿದ ಸಿಟಿ. ರವಿ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಒಂದು ಘಟನೆಯನ್ನು ಆಧರಿಸಿ ತೀರ್ಮಾನವನ್ನು ತೆಗೆದುಕೊಳ್ಳುವುದಕ್ಕೆ ಆಗುವುದಿಲ್ಲ. ಆದ್ದರಿಂದ ರಾಜ್ಯದಲ್ಲಿ ನಡೆದಿರುವ ಒಟ್ಟುವಿದ್ಯಮಾನಗಳು, ಉದ್ದೇಶಗಳು, ದುರುದ್ದೇಶಗಳೆಲ್ಲವನ್ನು ಆಧರಿಸಿ ಸಾಕ್ಷಾಧಾರವನ್ನು ಪರಿಗಣಿಸಿ ನಿರ್ಣಯ ತೆಗೆದುಕೊಳ್ಳುತ್ತೇವೆ.
ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ . ನಾಳೆ ದಿನ ಕೋರ್ಟಿನಲ್ಲೂ ಈ ಕುರಿತಂತೆ ಉತ್ತರ ನೀಡಬೇಕಾದ ಸಂದರ್ಭ ಎದುರಾಗುತ್ತದೆ. ಆದ್ದರಿಂದ ಅದಕ್ಕೆ ಬೇಕಾದ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.
ಇದನ್ನೂ ಓದಿ : ಮಹೇಂದ್ರ ಸಿಂಗ್ ಧೋನಿಗೆ ವಿಶೇಷ ಪತ್ರ ಬರೆದ ಪ್ರಧಾನಿ ಮೋದಿ. ಆ ಎರಡು ಪುಟಗಳ ಪತ್ರದಲ್ಲಿ ಏನಿದೆ ಗೊತ್ತಾ?
ಯಾವುದೇ ಸಮಾಜ ಘಾತುಕ ಶಕ್ತಿಗಳು ತಮ್ಮ ಇಷ್ಟದಂತೆ ನಡೆಯುವುದಕ್ಕೆ ಬಿಡುವುದಿಲ್ಲ. ಕುಣಿಸಿದಂತೆ ಕುಣಿಯುವ ಸರ್ಕಾರ ಇದಲ್ಲ. ವೋಟ್ ಬ್ಯಾಂಕಿನ ಆಸೆಗೆ ಕೆಲವುರು ಕುಣಿಸಿದಂತೆ ಕುಣಿಯುತ್ತಾರೆ. ಆದರೇ ನಮ್ಮ ಸರ್ಕಾರ ಆ ರೀತಿ ಅಲ್ಲ ಎಂದು ತಮ್ಮ ರಾಜಕೀಯ ಮೊನಚು ಮಾತುಗಳಿಂದ ಪ್ರತಿಪಕ್ಷಗಳನ್ನು ಕುಟುಕಿದ್ದಾರೆ.
ಕಾಂಗ್ರೆಸ್ನ ಕೆಲವರು ಕಾರಣಗಳಿಗಾಗಿ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೆಲ ಮಾತುಗಳನ್ನು ಗಮನಿಸಿದಾಗ “ಅಕ್ಕಿ ಮೇಲೂ ಆಸೆ ಅಕ್ಕನ ಮಕ್ಕಳ ಮೇಲೂ ಪ್ರೀತಿ”. ಎಂಬ ಗಾದೆ ಮಾತು ನೆನಪಾಗುತ್ತದೆ. ನಗರದಲ್ಲಿ ನಡೆದ ಗಲಭೆಯ ಕುರಿತು ಅವರ ಮಾತುಗಳೆಲ್ಲವೂ ವೋಟ್ ಬ್ಯಾಂಕಿಂಗ್ನ್ನು ಗಮನದಲ್ಲಿಟ್ಟುಕೊಂಡು ಆಡುತ್ತಿರುವುದು ಎಂದು ಟಾಂಗ್ ನೀಡಿದ್ದಾರೆ.
ಮತ ಬ್ಯಾಂಕಿಂಗ್ ದಕ್ಕೆ ಆಗಬಾರದೆಂಬ ಕಾರಣದಿಂದ ತಮ್ಮದೇ ಪಕ್ಷದ ಶಾಸಕನ ಮನೆಗೆ ಬೆಂಕಿ ಬಿದ್ದಿದ್ದರೂ, “ಕೋಮು ಗಲಭೆ ತಪ್ಪು, ಆದರೆ ಕಠಿಣ ಕ್ರಮ ತೆಗೆದುಕೊಳ್ಳಬಾರದು”, ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಮತ ಬ್ಯಾಂಕ್ ರಾಜಕೀಯ ಇನ್ನಾದರೂ ಕಾಂಗ್ರೆಸ್ ನಾಯಕರು ಬಿಡಲಿ. ಯಾವುದೇ ಸಂಘಟನೆ ತಪ್ಪು ಮಾಡಿದರೂ ನಾವು ಅವರನ್ನು ಬಿಡುವುದಿಲ್ಲ. ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ. ಬೆಂಗಳೂರು ಗಲಭೆಯಲ್ಲಿ ಉಂಟಾಗಿರುವ ಆಸ್ತಿ ನಷ್ಟವನ್ನು ಅವರಿಂದಲೇ ತುಂಬಿಸುತ್ತೇವೆ ಎಂದರು.