ಬರ್ಮಿಂಗ್ ಹ್ಯಾಮ್: ಟೋಕಿಯೊ ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಇಂದು ವೇಟ್‌ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ. ಮೀರಾ ಚಿನ್ನ ಗೆಲ್ಲುತ್ತಿದ್ದಂತೆ ಅವರ ಮನೆಯವರು ಸಂಭ್ರಮದಲ್ಲಿ ತೇಲಾಡಿದ್ದಾರೆ.
ಇನ್ನೂ ಈ ಬಗ್ಗೆ ಮೀರಾಬಾಯಿ ಚಾನು ತಮ್ಮ ಟ್ವಿಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ನನ್ನ ತಾಯಿ ಹಾಗೂ ಸಂಬಂಧಿಕರು ನನ್ನ ಗೆಲುವನ್ನು ಸಂಭ್ರಮಿಸುತ್ತಿರುವುದು,” ಎಂದು ಖುಷಿ ವ್ಯಕ್ತ ಪಡಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಇಂದು ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ. ವೇಟ್ ಲಿಫ್ಟರ್ ಸಂಕೇತ್ ಮಹದೇವ್ ಸಾಗರ್ ಅವರು 55 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.
My mom and other relatives celebrating victory at my home ✌️ pic.twitter.com/sTCIoTDVwM
— Saikhom Mirabai Chanu (@mirabai_chanu) July 31, 2022
ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ…ಯಾರೇ ತಪ್ಪಿತಸ್ಥರಿದ್ದರೂ ಎಲ್ಲರನ್ನೂ ಬಂಧಿಸುತ್ತೇವೆ : DG-IGP ಪ್ರವೀಣ್ ಸೂದ್..