ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಇಂದು ಮಧ್ಯಾಹ್ನ ತೆರಳುತ್ತಾರೆ.
ಸಿಎಂ ಬೊಮ್ಮಾಯಿ ಎರಡು ದಿನಗಳ ದೆಹಲಿ ಭೇಟಿಗೆ ತೆರಳುತ್ತಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜತೆ ಸಿಎಂ ಚರ್ಚೆ ಮಾಡ್ತಾರಾ, BBMP, ZP,TP ಚುನಾವಣೆ ಸೇರಿ ಹಲವು ವಿಚಾರದ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಸಾಧ್ಯತೆಗಳಿವೆ. ಸಿಎಂ ಬೊಮ್ಮಾಯಿ ಮಧ್ಯಾಹ್ನ 1.20ಕ್ಕೆ 11ನೇ ಬಾರಿ ದೆಹಲಿಗೆ ತೆರಳಲಿದ್ದಾರೆ. ಶುಕ್ರವಾರ ಸಂಜೆ 4.15ಕ್ಕೆ ದೆಹಲಿಯಿಂದ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ನಿಲ್ಲದ ಪಠ್ಯಪುಸ್ತಕ ಪರಿಷ್ಕರಣೆ ಸಂಘರ್ಷ… ವಿಶೇಷ ಸುದ್ದಿಗೋಷ್ಠಿ ಕರೆದ ಕಂದಾಯ ಸಚಿವ R. ಅಶೋಕ್…