ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ದುರಂತದಲ್ಲಿ ಬುಧವಾರ ಆರು ಜನ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಪಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಮೃತಪಟ್ಟವರೆಲ್ಲರೂ ಹೆಚ್ಚಿನ ಪ್ರಮಾಣದ ಮದ್ಯ ಸೇವಿಸಿದ್ದರು. ಇದರಿಂದಾಗಿ ಅವರ ದೇಹದೊಳಗಿನ ಅಂಗಗಳಿಗೆ ಹಾನಿಯಾಗಿತ್ತು ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.
ಇದನ್ನೂ ಓದಿ: ಅಮಾವಾಸ್ಯೆ ದಿನ ವಾಮಾಚಾರ…! ಕಲಬುರಗಿಯ ಜನರಲ್ಲಿ ಆತಂಕ ಸೃಷ್ಟಿಸಿದ ಆ ಕೃತ್ಯ…!
ಘಟನೆಗೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು ಮದ್ಯದಲ್ಲಿದ್ದ ವಿಷಕಾರಿ ಅಂಶದ ಬಗ್ಗೆ ನಿಖರ ಮಾಹಿತಿ ನೀಡಿದೆ ಎಂದು ಮೊರೆನಾ ಜಿಲ್ಲೆಯ ಆರೋಗ್ಯಾಧಿಕಾರಿ ಡಾ.ಆರ್.ಸಿ.ಬಂಡಿಲ್ ಹೇಳಿದ್ದಾರೆ.