ಬೆಂಗಳೂರು : ವಾಹನ ಸವಾರರಿಗೆ ಭರ್ಜರಿ ಗುಡ್ನ್ಯೂಸ್ ಇದಾಗಿದ್ದು, ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಸಿದೆ.
ಪೆಟ್ರೋಲ್, ಡಿಸೇಲ್ ದರದಲ್ಲಿ ಭಾರೀ ಕಡಿತವಾಗಿದೆ.
ಪೆಟ್ರೋಲ್ ದರ ಲೀಟರ್ಗೆ 9 ರೂಪಾಯಿ 50 ಪೈಸೆ ಕಡಿತ ಹಾಗೂ ಡಿಸೇಲ್ ದರ ಲೀಟರ್ಗೆ 7 ರೂಪಾಯಿ ಕಡಿತವಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಈ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ದುಬಾರಿ ದುನಿಯಾದಿಂದ ಕಂಗೆಟ್ಟಿದ್ದ ಜನತೆಗೆ ರಿಲೀಫ್ ಸಿಕ್ಕಿದ್ದು, 1.10 ಲಕ್ಷ ಕೋಟಿ ಹೆಚ್ಚುವರಿ ರಸಗೊಬ್ಬರ ಸಬ್ಸಿಡಿ ಸಿಕ್ಕಿದೆ.
ಕಬ್ಬಿಣ ಮತ್ತು ಸ್ಟೀಲ್ ಉತ್ಪನ್ನಗಳ ಅಬಕಾರಿ ಸುಂಕ ಕಡಿತವಾಗಿದೆ. ಕೇಂದ್ರ ಸರ್ಕಾರದಿಂದ ಸಿಮೆಂಟ್ ಬೆಲೆ ಇಳಿಕೆಗೆ ಕ್ರಮ ಕೈಗೊಂಡಿದೆ. ಪ್ಲಾಸ್ಟಿಕ್ ಉತ್ಪನ್ನಗಳ ಮೇಲೂ ಅಬಕಾರಿ ಸುಂಕ ಕಡಿತ ವಾಗಿದೆ. ಉಜ್ವಲ ಯೋಜನೆ ಗ್ಯಾಸ್ ಸಿಲಿಂಡರ್ಗೆ 200 ರೂ. ಸಬ್ಸಿಡಿ ನೀಡಲಾಗುತ್ತಿದೆ. ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ.ಮೋದಿ ಸರ್ಕಾರ – ಹಣದುಬ್ಬರ ತಡೆಯಲು ಹಲವು ಕ್ರಮ ಕೈಗೊಂಡಿದೆ.
ಇದನ್ನೂ ಓದಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಉದ್ಧಟತನ..! ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..!