ದಾವಣಗೆರೆ: ಇತ್ತೀಚೆಗೆ ಗುಜರಾತ್ ನಲ್ಲಿ ಸಿಎಂ ಬದಲಾವಣೆ ಆಗಿದ್ದು, ಭೂಪೇಂದ್ರ ಪಟೇಲ್ ಅವರು ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ಹೊಸ ಸಚಿವ ಸಂಪುಟವನ್ನೂ ರಚಿಸಲಾಗಿದ್ದು, ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುಜರಾತ್ ನಲ್ಲಿ ಹೊಸ ಸಂಪುಟ ರಚನೆಯಾದ ಬೆನ್ನಲ್ಲೇ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ನಮ್ಮಲ್ಲೂ ಗುಜರಾತ್ ಮಾದರಿಯಲ್ಲೇ ಹೊಸ ಸಂಪುಟ ರಚನೆಯಾದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ಪಕ್ಷ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ… ಜೆಡಿಎಸ್ ಗೆ ಗುಡ್ ಬೈ ಹೇಳಿದ ಕೋಲಾರ ಶಾಸಕ ಶ್ರೀನಿವಾಸಗೌಡ…
ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ ‘ನಮ್ಮಲ್ಲಿ ಈಗಾಗಲೇ ಸಿಎಂ ಬದಲಾವಣೆ ಮಾಡಲಾಗಿದೆ. ಹೊಸ ಸಿಎಂ ಬೊಮ್ಮಾಯಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್ ಮಾದರಿಯಲ್ಲಿ ಇಲ್ಲೂ ನೋ ರಿಪೀಟ್ ಸಚಿವ ಸಂಪುಟ ರಚನೆಯಾಗಬೇಕು. ಆಗ ಎಲ್ಲಾ ಅರ್ಹ ಶಾಸಕರಿಗೂ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ. ಇದು ನನ್ನೊಬ್ಬನ ಅಭಿಪ್ರಾಯವಲ್ಲ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವಾಗಿದೆ’ ಎಂದಿದಿದ್ದಾರೆ.
ರೇಣುಕಾಚಾರ್ಯ ಅವರು ಗುಜರಾತ್ ಮಾದರಿಯಲ್ಲಿ ಹೊಸ ಸಂಪುಟ ರಚನೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ರಾಜ್ಯ ಕಾರ್ಯಕಾರಿಣಿಗೂ ಮುನ್ನ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.