ಬೆಂಗಳೂರು : ಮಂಡ್ಯ ಸಂಸದೆ ಸುಮಲತಾರ ಆಪ್ತ ಇಂಡುವಾಳು ಸಚ್ಚಿದಾನಂದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ್, ಗೋಪಾಲಯ್ಯ ಅವರ ಸಮ್ಮುಖದಲ್ಲಿ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಈ ಬಳಿಕ ಮಾತನಾಡಿದ ಸಚ್ಚಿದಾನಂದ ಅವರು, ಸುಮಲತಾ ಅಂಬರೀಶ್ರ ಅಪ್ಪಣೆ ಪಡೆದೇ ನಾನು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ನಾನು ಟಿಕೆಟ್ ಆಸೆಗಾಗಿ ಬಿಜೆಪಿಗೆ ಸೇರಿಲ್ಲ, ನಾನೊಬ್ಬ ಸಾಮಾನ್ಯ ಬಿಜೆಪಿ ಕಾರ್ಯಕರ್ತ , ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದಿಂದ ಯಾರೇ BJP ಅಭ್ಯರ್ಥಿಯಾಗಲಿ ಅವರನ್ನು ವಿಧಾನಸೌಧಕ್ಕೆ ಕಳಿಸುವ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ : ಕರ್ನಾಟಕ ಎಲೆಕ್ಷನ್ ಬಗ್ಗೆ ಮೇಜರ್ ಡಿಸಿಷನ್ ಆಗುತ್ತಾ..? ದೆಹಲಿಯಿಂದ ಸಿಎಂ ಬೊಮ್ಮಾಯಿಗೆ ಬಂತು ತುರ್ತು ಬುಲಾವ್…!