ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಬ್ಬರೂ ನಾಯಕರ ಸಭೆ ತೀವ್ರ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಅವರು ನಿರಾಣಿ ಮುಂದಿನ ಸಿಎಂ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ಈ ಕುರಿತು ಕಮಲ ಪಾಳಯದಲ್ಲಿ ಸಾಕಷ್ಟು ಚರ್ಚೆ ನಡೆದಿತ್ತು.
ಇದನ್ನೂ ಓದಿ: ರೇಪ್ ತಪ್ಪಿಸಲಾಗದಿದ್ರೆ ಮಲಗಿ ಆನಂದಿಸಿ… ವಿವಾದಿತ ಹೇಳಿಕೆಗೆ ಕ್ಷಮೆ ಕೇಳಿದ ರಮೇಶ್ಕುಮಾರ್…
ಇದರ ಬೆನ್ನಲ್ಲೇ ಅಧಿವೇಶನದ ಸಂದರ್ಭದಲ್ಲಿ ಉಭಯ ನಾಯಕರು ಭೇಟಿಯಾಗಿದ್ದಾರೆ. ಈಶ್ವರಪ್ಪ ಅವರು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದು, ಅವರು ಹೋಟೆಲ್ ಗೆ ಭೇಟಿ ನೀಡಿದ ನಿರಾಣಿ ಅವರು ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮತ್ತೊಂದು ಬಣ ಪ್ರಾರಂಭವಾಯಿತಾ? ಮುಖ್ಯಮಂತ್ರಿಯಾಗಲು ನಿರಾಣಿ ಪಕ್ಷದ ನಾಯಕರ ಸಹಕಾರ ಕೇಳ್ತಿದ್ದಾರಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.