ಬೆಂಗಳೂರು: ಪಾಂಡವಪುರ ಸಕ್ಕರೆ ಕಾರ್ಖಾನೆಗೂ ನನಗೂ ಸಂಬಂಧವಿಲ್ಲ. ಅಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಮಾಹಿತಿ ಪಡೆಯುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೈಗಾರಿಕೆಗಾಗಿ ಪಡೆದು ಬಳಕೆ ಮಾಡದ ಜಮೀನು ವಾಪಸ್: ಮುರುಗೇಶ್ ನಿರಾಣಿ
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು ‘ಪಾಂಡವಪುರ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ವೇತನ ನೀಡಿಲ್ಲ ಎಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡುತ್ತಾ, ವೇತನ ಕೊಟ್ಟಿಲ್ಲವೆಂಬುದು ಸುಳ್ಳು, ಅಲ್ಲಿ ಯಾವುದೇ ಸಮಸ್ಯೆ ಇಲ್ಲ. ಪ್ರತಿಭಟನೆ ಬಗ್ಗೆ ನಾನು ಮಾಹಿತಿ ಪಡೆಯುತ್ತೇನೆ. ನನಗೂ ಕಾರ್ಖಾನೆಗೂ ಯಾವುದೇ ಸಂಬಂಧವಿಲ್ಲ. ಅದಕ್ಕೆ ಸಂಬಂಧಿಸಿದವರು ಉತ್ತರ ಕೊಡುತ್ತಾರೆ ಇನ್ನು ನಿರಾಣಿ ಗ್ರೂಪ್ ಗೂ ನಾನು 2008 ರಲ್ಲೇ ರಾಜೀನಾಮೆ ನೀಡಿದ್ದೇನೆ. ನಾನು ಅಲ್ಲಿ ಡೈರೆಕ್ಟರ್ ಕೂಡಾ ಅಲ್ಲ. ಎಂದು ತಿಳಿಸಿದರು.