ಮಂಗಳೂರು: ರಾಜ್ಯದಲ್ಲಿ ಲೌಡ್ ಸ್ಪೀಕರ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ನಿಯಂತ್ರಣಕ್ಕೆ ದ.ಕ-ಉಡುಪಿ ಸೆಂಟ್ರಲ್ ಮುಸ್ಲಿಂ ಕಮಿಟಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಧ್ವನಿ ವರ್ಧಕ ಬಳಸುವ ಬಗ್ಗೆ ಯಾವುದೇ ತಕರಾರು ಇಲ್ಲ… ಪೊಲೀಸ್ ಕಮಿಷನರ್ ಕಮಲ್ ಪಂತ್…
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಎಸ್.ಮಹಮ್ಮದ್ ಮಸೂದ್ ಅವರು ಆದೇಶ ಹೊರಡಿಸಿದ್ದಾರೆ. ಅವರು ರಾಜ್ಯ ಸರ್ಕಾರದ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ್ದು, ಕುದ್ರೋಳಿಯ ಜಾಮೀಯ ಮಸೀದಿಯಲ್ಲಿ ಐದು ಹೊತ್ತು ನಮಾಝ್ ನಲ್ಲೂ ಮೈಕ್ ಬಳಕೆ ಮಾಡೋದಿಲ್ಲ. ಮಸೀದಿ ಅಧ್ಯಕ್ಷನಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಬೇರೆ ಎಲ್ಲಾ ಮಸೀದಿಗಳಿಗೆ ಮೈಕ್ ಸೌಂಡ್ ಕಡಿಮೆ ಮಾಡಲು ಸೂಚನೆ ನೀಡಿದ್ದೇವೆ. ಎಲ್ಲರೂ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದ್ಧಾರೆ.
ಇದನ್ನೂ ಓದಿ: ಆಜಾನ್-ಸುಪ್ರಭಾತ ಸಂಘರ್ಷಕ್ಕೆ ಫುಲ್ಸ್ಟಾಪ್..! ಸರ್ಕಾರದಿಂದ ನ್ಯೂ ಗೈಡ್ಲೈನ್ಸ್ ರಿಲೀಸ್ ..!