ಬೆಂಗಳೂರು : ಮಳೆ ಬಂದಾಗ ಜಲಾವೃತ ಆಗುತ್ತಿರುವ ಮೈಸೂರು-ಬೆಂಗಳೂರು ರಸ್ತೆಯ ಚರಂಡಿ ಅಗಲೀಕರಣ ಮಾಡಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿರ್ಧರಿಸಿದ್ದಾರೆಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ಧಾರೆ.
ಬೆಂಗಳೂರಿನಲ್ಲೇ ಇರುವ ನಿತಿನ್ ಗಡ್ಕರಿ ಅವರನ್ನು ಇಂದು ಬೆಳಗ್ಗೆ ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಹೆದ್ದಾರಿ ಬಗ್ಗೆ ಚರ್ಚಿಸಿದರು. ರಸ್ತೆ ಪಕ್ಕದ ಚರಂಡಿಗಳನ್ನು ಅಗಲೀಕರಣ ಮಾಡಲು ಹೊಸ ಯೋಜನೆಯನ್ನೇ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ದೊಡ್ಡಬಳ್ಳಾಪುರಲ್ಲಿ ಬಿಜೆಪಿ ಜನ ಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ..! ರಘುನಾಥಪುರದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ..!