ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದ್ರೌಪದಿ ಮುರ್ಮು ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಆಗಮಿಸಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಂಸದೀಯ ವ್ಯವಹಾರಗಳ ಸಚಿ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿ ದ್ರೌಪದಿ ಮುರ್ಮು ಅವರ ನಾಮಪತ್ರ ಸಿದ್ಧಪಡಿಸಲಾಗುತ್ತಿದ್ದು, ನಾಳೆ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖರು ದ್ರೌಪದಿ ಮುರ್ಮು ಅವರ ಹೆಸರನ್ನು ಪ್ರಸ್ತಾಪಿಸಲಿದ್ದು, ಕೇಂದ್ರ ಸಚಿವರು, ಹಿರಿಯ ಬಿಜೆಪಿ ನಾಯಕರು ಇವರ ಹೆಸರನ್ನು ಅನುಮೋದಿಸಲಿದ್ದಾರೆ.
Met Smt. Droupadi Murmu Ji. Her Presidential nomination has been appreciated across India by all sections of society. Her understanding of grassroots problems and vision for India’s development is outstanding. pic.twitter.com/4WB2LO6pu9
— Narendra Modi (@narendramodi) June 23, 2022
ನಾಮಪತ್ರ ಸಲ್ಲಿಕೆ ಬಳಿಕ ದ್ರೌಪದಿ ಮುರ್ಮು ಅವರು ದೇಶಾದ್ಯಂತ ಸಂಚರಿ ಪ್ರಚಾರ ಮಾಡಲಿದ್ದಾರೆ. ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಶಾಸಕರನ್ನು ಭೇಟಿ ಮಾಡಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಜೂನ್ 29 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮತದಾನದ ಅವಶ್ಯಕತೆ ಇದ್ದರೆ, ಜುಲೈ 18 ರಂದು ಮತದಾನ ನಡೆಯಲಿದೆ ಮತ್ತು ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಇನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.